ಅರಣ್ಯಕಾಂಡ 34:1-29 KBSI1970 - Bible AI

1ಕರ್ತನು ಮೋಶೆಯ ಸಂಗಡ ಮಾತನಾಡಿ--

2ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್‌ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್‌ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.

3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್‌ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.

4ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್‌ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.

5ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.

6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.

7ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್‌ ಪರ್ವತದ ವರೆಗೂ

8ಸಾಲು ಮಾಡಿಕೊಂಡು ಹೋರ್‌ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು

9ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.

10ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.

11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್‌ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.

12ಅಲ್ಲಿಂದ ಮೇರೆಯು ಯೊರ್ದನ್‌ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.

13ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.

14ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.

15ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.

16ಕರ್ತನು ಮೋಶೆಯ ಸಂಗಡ ಮಾತನಾಡಿ

17ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ

18ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.

19ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ

20ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ

21ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ

22ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ

23ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ

24ಎಫ್ರಾಯಾಮ್‌ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ

25ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ

26ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ

27ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ

28ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.

29ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.

le>