1ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
3ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
5ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
6ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
8ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.