ಕೀರ್ತನೆಗಳು 98:1-9 KBSI1970 - Bible AI

1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

2ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.

3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.

4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.

5ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.

6ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.

7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.

8ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.

le>